‘ಕೊರೊನಾ ವೈರಸ್ ಬಗ್ಗೆ ಆತಂಕ ಬೇಡ’- ಸುತ್ತೂರು ಶ್ರೀ ಶಿವರಾತ್ರಿ ಸ್ವಾಮೀಜಿ

  • by

ಕೊರೊನಾ ಎಂಬ ಡೆಡ್ಲಿ ವೈರಸ್ ಇಡೀ ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿದೆ. ಕೋವಿಡ್ -19 ನಿಂದಾಗಿ ಕಳೆದ 24 ಗಂಟೆಗಳಲ್ಲಿ 2388 ಮಂದಿ ಮೃತಪಟ್ಟಿದ್ದಾರೆ. ಕೋವಿಡ್ – 19 ಕೇಂದ್ರ ಸ್ಥಾನ ಯುರೋಪ್ ನಲ್ಲಿ ಮರಣ ಪ್ರಮಾಣ ಹೆಚ್ಚುತ್ತಲೇ ಇದೆ. ಇಟಲಿ , ಫ್ರಾನ್ಸ್ , ನಲ್ಲಿ ಕೊರೊನಾ ವೈರಸ್ ಮರಣ ಮೃದುಂಗ ಬಾರಿಸುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 683 ಸ್ಪೇನ್ ನಲ್ಲಿ, 656 ಫ್ರಾನ್ಸ್ ನಲ್ಲಿ 231 ಮಂದಿ ಕೊರೊನೀ ವೈರಸ್ ನಿಂದಾಗಿ ಸಾವನ್ನಪ್ಪಿದ್ದಾರೆ.


ಕೊರೊನಾ ಸೋಂಕು ಹರಡದಂತೆ ಭಾರತ ಸೇರಿ ವಿವಿಧ ದೇಶಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇಟಲಿ, ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಲಾಕ್ ಡೌನ್ ಮಂತ್ರ ಜಪಿಸುತ್ತದೆ. ಪರಿಣಾಮ, 3 ಬಿಲಿಯನ್ ಗೂ ಅಧಿಕ ಮಂದಿ ಮನೆಯಲ್ಲೇ ಉಳಿಯುವಂತಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಕುರಿತು ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಲಹೆ ನೀಡಿದ್ದಾರೆ.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಲಹೆ..!

ಈ ಬಗ್ಗೆ ಮಾತನಾಡಿರುವ ಅವರು, ಜನರು ಸೂಕ್ಷ್ಮತೆ ಹಾಗೂ ಜಾಗರೂಕತೆಯಿಂದ ವರ್ತಿಸುವ ಮೂಲಕ ಕೊರೊನಾ ವೈರಸ್ ಹರಡುವಿಕೆಯಿಂದ ಪಾರಾಗುವ ಕಡೆಗೆ ಗಮನ ಹರಿಸಬೇಕು. ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದ್ದಾರೆ,

ಕೊರೊನಾ ವೈರಸ್ ಇಡೀ ಜಗತ್ತನ್ನೇ ತಲ್ಲಣಗೊಳಿಸಿದೆ. ಇದು ತೀಕ್ಷ್ಣವಾಗಿ ಹರಡುವ ಮಾರಣಾಂತಿಕ ರೋಗವಾಗಿದೆ. ಆದರೆ. ಇದ್ರಿಂದ ಜನತೆ ಭಯಭೀತರಾಗಬೇಕಾಗಿಲ್ಲ. ಯಾರೂ ವಿಚಲಿತರಾಗಬೇಕಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಮನೆಗಳಲ್ಲಿ ಏಕಾಂತೆತೆಯ ಭಾವನೆಯನ್ನು ಉಂಟು ಮಾಡಿಕೊಳ್ಳಬಾರದು. ಕುಟುಂಬದ ಸದಸ್ಯರು ಸ್ನೇಹಿತರೊಂದಿಗೆ ಸೌಹಾರ್ದಯುತ ಸನ್ನಿವೇಶ ಕಲ್ಪಿಸಿಕೊಳ್ಳಬೇಕು ಎಂದು ಶ್ರೀಗಳು ಮನವಿ ಮಾಡಿದ್ದಾರೆ.

‘ಸಿದ್ಧಗಂಗಾ ಶ್ರೀಮಠದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಭಂಧ’

ಸಿದ್ಧಗಂಗಾ ಮಠಕ್ಕೆ ಸಾರ್ವಜನಿಕರು ಹಾಗೂ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ತಿಳಿಸಿದ್ದಾರೆ. ಶ್ರೀಮಠದಲ್ಲಿ 1,500 ವಿದ್ಯಾರ್ಥಿಗಳು ಇದ್ದಾರೆ. ಇವರಾರು ಮನೆಗೆ ತೆರಳಲು ಇಷ್ಟಪಟ್ಟಿಲ್ಲ. ಹಾಗಾಗಿ ಇವರನ್ನು ಇಲ್ಲೇ ಉಳಿಸಿಕೊಂಡಿದ್ದೇವೆ. ಈ ವಿದ್ಯಾರ್ಥಿಗಳ ಸೂಕ್ತ ತಪಾಸಣೆ ಮಾಡಿ ನಿಗಾ ವಹಿಸಲಾಗಿದೆ ಎಂದು ಶ್ರೀಗಳು ತಿಳಿಸಿದರು.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ದೇಶದ ಪ್ರತಿಯೊಬ್ಬರು ಮಂಗಳವಾರ ಮಧ್ಯರಾತ್ರಿ 12 ಗಂಟೆಯಿಂದ ಮನೆಯಿಂದ ಹೊರಗೆ ಬರಲೇಬಾರದು. ಇದು ಸಂಪೂರ್ಣ ಬಂದ್ , ಲಾಕ್ ಡೌನ್ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ, ನಾವು 21 ದಿನಗಳ ಕಾಲ ಎಚ್ಚರಿಕೆಯಿಂದ ಇರಬೇಕು. ಇಲ್ಲದಿದ್ದಲ್ಲಿ ಭಾರತ 21 ವರ್ಷಗಳ ಕಾಲ ಹಿಂದಕ್ಕೆ ಹೋಗುತ್ತದೆ. ಹಾಗಾಗಿ ಜನರು ಮನೆಯಿಂದ ಹೊರಗೆ ಹೋಗುವ ಒಂದು ಹೆಜ್ಜೆ ಕೂಡಾ ಕೊರೊನಾದಂತಹ ಗಂಭೀರ ಕಾಯಿಲೆಗೆ ಆಹ್ವಾನ ನೀಡಬಲ್ಲದ್ದು. ಕೊರೊನಾ ವಿರುದ್ಧ ಹೋರಾಡಲು ಎಲ್ಲರೂ ಕೂಡಾ ಸಹಕರಿಸಬೇಕು. ಕೊರೊನಾ ವೈರಸ್ ವಿರುದ್ಧ ಹೋರಾಡಲು 15 ಸಾವಿರ ಕೋಟಿ ಮೀಸಲಿಡಲಾಗಿದೆ. ಕೊರೊನಾ ಪರೀಕ್ಷಾ ಕೇಂದ್ರ, ಪ್ರತ್ಯೇಕ ವಾರ್ಡ್, ಹಾಸಿಗೆ ಸೌಲಭ್ಯ ಹಾಗೂ ಐಸಿಯು , ವೆಂಟಿಲೇಟರ್ ಗಳು, ವೈದ್ಯಕೀಯ ಕಾರ್ಯಕರ್ತರು ಸೇರಿದಂತೆ ಇತರೆ ಸೌಲಭ್ಯಗಳಿಗಾಗಿ 15. ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ